POLICE BHAVAN KALABURAGI

POLICE BHAVAN KALABURAGI

16 July 2014

Gulbarga District Reported Crimes

ಮಟಕಾ ಜೂಜಾಟದಲ್ಲಿ ನಿರತ ವ್ಯಕ್ತಿಗಳ ಬಂಧನ :
ನಿಂಬರ್ಗಾ ಠಾಣೆ : ದಿನಾಂಕ 15-06-2014 ರಂದು ಹಡಲಗಿ ಗ್ರಾಮದ ಹನುಮಾನ ದೇವರ ಗುಡಿಯ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಮಟಕಾ ಜೂಜಾಟ ನಡೆಸುತ್ತಿದ್ದಾನೆ ಅಂತ ಮಾಹಿತಿ ಬಂದ ಮೇರೆಗೆ ಪಿ.ಎಸ್.ಐ. ನಿಂಬರ್ಗಾ ಹಾಗು ಸಿಬ್ಬಂದಿಯವರು ಮತ್ತು ಪಂಚರೊಂದಿಗೆ ಹಡಲಗಿ ಗ್ರಾಮಕ್ಕೆ ಹೋಗಿ ಗ್ರಾಮದ ಹನುಮಾನ ದೇವರ ಗುಡಿಯ ಮರೆಯಲ್ಲಿ ನಿಂತು ನೋಡಲಾಗಿ ಗುಡಿಯ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದು ಓಪನ ನಂಬರ ಬಂದರೆ 1 ರೂಪಾಯಿಗೆ 8 ರೂಪಾಯಿ ಗೆಲ್ಲಿರಿ ಅಂತ ಮತ್ತು ಜಾಯಿಂಟ ನಂಬರ ಬಂದರೆ 1 ರೂಪಾಯಿಗೆ 80 ರೂಪಾಯಿ ಗೆಲ್ಲಿರಿ ಅಂತ ಕೂಗುತ್ತಾ ಮಟಕಾ ಅಂಕೆ ಸಂಖ್ಯೆಯುಳ್ಳ ಚೀಟಿಗಳನ್ನು ಬರೆದುಕೊಡುತ್ತಿರುವದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ವಿಚಾರಿಸಲು ತನ್ನ ಹೆಸರು ರಾಜೇಶ ತಂದೆ ಮಾಣಿಕರಾವ ಬರ್ಫೆ ಸಾ|| ದರ್ಗಾ ಶಿರೂರ ಗ್ರಾಮ ಅಂತ ತಿಳಿಸಿದನು ಅವನನ್ನು ಚೆಕ ಮಾಡಲಾಗಿ ಮಟಕಾ ಜೂಜಾಟಕ್ಕೆ ಬಳಿಸಿರುವ 01] ನಗದು ಹಣ 370/-, 02] ಒಂದು ಮಟಕಾ ಅಂಕಿ ಸಂಖ್ಯೆಯುಳ್ಳ ಚೀಟಿ, 03] ಒಂದು ಬಾಲ ಪೆನ್ನ ನೇದ್ದವುಗಳನ್ನು ವಶಪಡಿಸಿಕೊಂಡು ಸದಿಯವನೊಂದಿಗೆ ನಿಂಬರ್ಗಾ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.
ನಿಂಬರ್ಗಾ ಠಾಣೆ : ದಿನಾಂಕ 15-07-2014 ರಂದು ನಿಂಬರ್ಗಾ ಗ್ರಾಮದ ಅಂಬೇಡ್ಕರ ಸರ್ಕಲ ರೋಡಿನ ಮೇಲೆ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ಮಟಕಾ ಜೂಜಾಟ ನಡೆಸುತ್ತಿದ್ದಾನೆ ಅಂತ ಮಾಹಿತಿ ಬಂದ ಮೇರೆಗೆ ಪಿ.ಎಸ್.ಐ. ನಿಂಬರ್ಗಾ ಹಾಗು ಸಿಬ್ಬಂದಿಯವರು ಮತ್ತು ಪಂಚರೊಂದಿಗೆ ನಿಂಬರ್ಗಾ ಗ್ರಾಮದ ಅಂಬೇಡ್ಕರ ಸರ್ಕಲ ಹತ್ತಿರ ಮರೆಯಲ್ಲಿ ನಿಂತು ನೋಡಲಾಗಿ ಅಂಬೇಡ್ಕರ ಸರ್ಕಲ ಹತ್ತಿರ ಸಾರ್ವಜನಿಕ ರೋಡಿನ ಮೇಲೆ ಒಬ್ಬ ವ್ಯಕ್ತಿ ಸಾರ್ವಜನಿಕರಿಂದ ಹಣ ಪಡೆದು ಓಪನ ನಂಬರ ಬಂದರೆ 1 ರೂಪಾಯಿಗೆ 8 ರೂಪಾಯಿ ಗೆಲ್ಲಿರಿ ಅಂತ ಮತ್ತು ಜಾಯಿಂಟ ನಂಬರ ಬಂದರೆ 1 ರೂಪಾಯಿಗೆ 80 ರೂಪಾಯಿ ಗೆಲ್ಲಿರಿ ಅಂತ ಕೂಗುತ್ತಾ ಮಟಕಾ ಅಂಕೆ ಸಂಖ್ಯೆಯುಳ್ಳ ಚೀಟಿಗಳನ್ನು ಬರೆದುಕೊಡುತ್ತಿರುವದನ್ನು ಖಚಿತ ಪಡಿಸಿಕೊಂಡು ದಾಳಿ ಮಾಡಿ ಹಿಡಿದು ವಿಚಾರಿಸಲು ತನ್ನ ಹೆಸರು ವಿಠ್ಠಲ ತಂದೆ ಚಂದಪ್ಪ ರಂಗನ ಸಾ|| ನಿಂಬರ್ಗಾ ಗ್ರಾಮ ಅಂತ ತಿಳಿಸಿದನು ಅವನನ್ನು ಚೆಕ ಮಾಡಲಾಗಿ ಮಟಕಾ ಜೂಜಾಟಕ್ಕೆ ಬಳಿಸಿರುವ 01] ನಗದು ಹಣ 1050/-, 02] ಒಂದು ಮಟಕಾ ಅಂಕಿ ಸಂಖ್ಯೆಯುಳ್ಳ ಚೀಟಿ, 03] ಒಂದು ಬಾಲ ಪೆನ್ನ ನೇದ್ದವುಗಳನ್ನು ವಶಪಡಿಸಿಕೊಂಡು ಸದರಿಯವನೊಂದಿಗೆ ನಿಂಬರ್ಗಾ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.
ಅಪಘಾತ ಪ್ರಕರಣಗಳು :
ಗ್ರಾಮೀಣ ಠಾಣೆ : ದಿನಾಂಕ:-15-07-2014 ರಂದು ರಾತ್ರಿ 08:00 ಗಂಟೆ ಸುಮಾರಿಗೆ ಮೃತ ಮಹಮ್ಮದ ಶಫೀ ತಂದೆ ಚಾಂದಸಾಬ ಮಡಕಿ ಸಾ:ಭೀಮಳ್ಳಿ ಇತನು ತನ್ನ ಹಿರೋ ಹೊಂಡಾ ಪ್ಯಾಶನ ಮೋಟಾರ ಸೈಕಲ್ ನಂ ಕೆಎ-02 ಇರ್-9539 ನೇದ್ದರ ಮೇಲೆ ಭೀಮಳ್ಳಿ ಗ್ರಾಮದಿಂದ ಗುಲಬರ್ಗಾಕ್ಕೆ ಕೆಲಸದ ಕುರಿತು ಬಂದು ಕೆಲಸ ವಗೈರೇ ಮುಗಿಸಿಕೊಂಡು ಮರಳಿ ಗುಲಬರ್ಗಾದಿಂದ ಭೀಮಳ್ಳಿ ಗ್ರಾಮಕ್ಕೆ ಹೋಗುವ ಕುರಿತು ಗುಲಬರ್ಗಾ ಆಳಂದ ಮೇನ ರೋಡಿನ ರೋಡ ಎಡಗೆಯಿಂದ ಕೇರಿ ಭೋಸಗಾ ಕ್ರಾಸ ಹತ್ತಿರ ಇರುವ ಜೈ ಭವಾನಿ ದಾಬಾ ಎದುರಗಡೆ ಹಿರೋ ಹೊಂಡಾ ಪ್ಯಾಶನ ಮೋಟಾರ ಸೈಕಲ್ ನಂ ಕೆಎ-02 ಇಆರ್-9539 ನೇದ್ದರ ಮೇಲೆ ಹೋಗುವಾಗ ಅದೇ ವೇಳೆಗೆ ಎದರಗಡೆ ಆಳಂದ ಕಡೆಯಿಂದ ಕ್ರೋಜರ ಜೀಪ ನಂ ಕೆಎ-33-2548 ನೇದ್ದರ ಚಾಲಕನು ತನ್ನ ಕ್ರೋಜರನ್ನು  ಅತೀವೇಗ ಮತ್ತು ನಿಸ್ಕಾಜಿತನದಿಂದ  ಚಲಾಯಿಸಿ ಬಂದು ಮೋಟಾರ ಸೈಕಲಕ್ಕೆ ಜೋರಾಗಿ ಅಪಘಾತ ಪಡಿಸಿದ್ದರಿಂದ ಮೃತ ಮಹಮ್ಮದ ಶಫಿ ಇತನು ರೋಡಿನ ಮೇಲೆ ಬಿದ್ದು ಆತನ ತಲೆಯ ಹಿಂಬಾಗಕ್ಕೆ, ಎರಡು ಭುಜಕ್ಕೆ, ಎರಡು ಕಾಲು ಮೊಳಕಾಲಿಗೆ ಭಾರಿ ರಕ್ತಗಾಯ ಮತ್ತು ತರಚಿದ ಗಾಯಗಳಾಗಿ ಎಡ ಕಿವಿಯಿಂದ ರಕ್ತ ಸೋರಿ ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ ಅಂತಾ ಶ್ರೀ ಚಾಂದಾಸಾಬ ತಂದೆ ಮಕ್ತುಮಸಾಬ ಮಡಕಿ ಸಾ:ಭೀಮಳ್ಳಿ ತಾ:ಜಿ:ಗುಲಬರ್ಗಾ ರವರು ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.     
ಹೆಚ್ಚುವರಿ ಸಂಚಾರಿ ಠಾಣೆ : ಶ್ರೀಮತಿ ಸುಸಿಲಾಬಾಯಿ ಇವರನ್ನು ವಿಚಾರಿಸಲು ಫಿರ್ಯಾದಿ ಹೇಳಿಕೆ ನೀಡಿದರ ಸಾರಾಂಶವೆನೆಂದರೆ ದಿನಾಂಕ: 15-07-2014 ರಂದು ಮಧ್ಯಾಹ್ನ 1-30 ಗಂಟೆಗೆ  ಕಲ್ಯಾಣಿ ಪೆಟ್ರೋಲ್ ಪಂಪ್ ನಲ್ಲಿ ನನ್ನ ಮಗಳಾದ ದೀಪಿಕಾ ಇವಳ ಮೋ/ಸೈಕಲ್ ನಂ; ಕೆಎ 32 ವಾಯಿ 8711 ನೆದ್ದಕ್ಕೆ ಪೆಟ್ರೋಲ್ ಹಾಕಿಸಿಕೊಳ್ಳಲು ಹೋಗಿ ಮೋ/ಸೈಕಲ್ ನಿಲ್ಲಿಸುವಾಗ ಹಿಂದಿನಿಂದ ಇನೋವಾ ಕಾರ ನಂ: ಕೆಎ 56 ಎಮ್ 6999 ನೆದ್ದರ ಚಾಲಕನು ಅತಿವೇಗ ಮತ್ತು ಅಲಕ್ಷತನದಿಂದ ಚಲಾಯಿಸಿಕೊಂಡು ಬಂದು ನನಗೆ ಮತ್ತು ಮೋ/ಸೈಕಲಕ್ಕೆ ಡಿಕ್ಕಿ ಪಡಿಸಿ ಅಪಘಾತಮಾಡಿ ನನಗೆ ಭಾರಿ ಗಾಯಗೊಳಿಸಿ ಕಾರ ಸಮೇತ ಓಡಿ ಹೋಗಿರುತ್ತಾನೆ ಅಂತಾ  ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ಹೆಚ್ಚುವರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No comments: