POLICE BHAVAN KALABURAGI

POLICE BHAVAN KALABURAGI

08 August 2015

Kalaburagi District Reported Crimes

ಮಟಕಾ ಜೂಜಾಟದಲ್ಲಿ ನಿರತ ವ್ಯಕ್ತಿಯ ಬಂಧನ :
ಅಫಜಲಪೂರ ಠಾಣೆ : ದಿನಾಂಕ 08-08-2015 ರಂದು ಮಾಶಾಳ ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಂತುಕೊಂಡು ಹೊಗಿ ಬರುವ ಜನರಿಗೆ 1 ರೂಪಾಯಿಗೆ 80 ರೂಪಾಯಿ ಗೆಲ್ಲರಿ ಅಂತಾ ಅನ್ನುತ್ತಾ ಸಾರ್ವಜನಿಕರ ಮನವೂಲಿಸಿ, ಜನರನ್ನು ವಂಚಿಸಿ ಅವರಿಂದ ಹಣ ಪಡೆದು, ಅವರಿಗೆ ಅಂಕಿ ಸಂಖ್ಯೆ ಬರೆದ ಮಟಕಾ ಚೀಟಿಗಳನ್ನು ಕೊಟ್ಟು, ಮೋಸದಿಂದ ಮಟಕಾ ಬರೆದುಕೊಳ್ಳುತ್ತಿದ್ದಾನೆ ಅಂತಾ ಬಾತ್ಮಿ ಬಂದ ಮೇರೆಗೆ, ಸುರೇಶ ಬೆಂಡೆಗುಂಬಳ ಪಿ.ಎಸ್.ಐ ಅಫಜಲಪೂರ ಠಾಣೆ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಸಿ.ಪಿ.ಐ ಸಾಹೇಬರು ಅಫಜಲಪೂರ ರವರ ಮಾರ್ಗದರ್ಶನದಲ್ಲಿ ಸ್ಥಳಕ್ಕೆ ಹೋಗಿ, ಮಾಶಾಳ ಗ್ರಾಮದ ಬಸ್ ನಿಲ್ದಾಣದಿಂದ ಸ್ವಲ್ಪ ದೂರು ನಮ್ಮ ವಾಹನವನ್ನು ನಿಲ್ಲಿಸಿ ಮರೆಯಾಗಿ ನಿಂತು ನೋಡಲು, ಬಸ್ ನಿಲ್ದಾಣದ ಸಾರ್ವಜನಿಕ ಸ್ಥಳದಲ್ಲಿ ಒಬ್ಬ ವ್ಯಕ್ತಿ ನಿಂತುಕೊಂಡು ಹೋಗಿ ಬರುವ ಜನರಿಗೆ 1 ರೂಪಾಯಿಗೆ 80 ರೂಪಾಯಿ ಕೊಡುತ್ತೆನೆ ಅಂತಾ ಕರೆದು, ಜನರಿಗೆ ವಂಚಿಸಿ ಅವರಿಂದ ಹಣ ಪಡೆದು ಅವರಿಗೆ ಅಂಕಿ ಸಂಖ್ಯ ಬರೆದುಕೊಟ್ಟು, ಮೋಸದಿಂದ ಮಟಕಾ ಬರೆದುಕೊಳ್ಳುತ್ತಿದ್ದುದನ್ನು ಖಚಿತಪಡಿಸಿಕೊಂಡು ದಾಳಿ ಮಾಡಿ ಹಿಡಿದು ಸದರಿಯವನ ಹೆಸರು ವಿಳಾಸ ವಿಚಾರಿಸಲಾಗಿ ಮಡೆಪ್ಪ ತಂದೆ ಕಲ್ಲಪ್ಪ ಕುಂಬಾರ ಸಾ: ಮಾಶಾಳ ತಾ: ಅಫಜಲಪೂರ ಅಂತಾ ತಿಳಿಸಿದ್ದು, ಸದರಿಯವನನ್ನು ಮಟಕಾ ಬರೆದುಕೊಂಡು ಎಲ್ಲಿ ಕೊಡುತ್ತಿ, ಯಾರಿಗೆ ಕೊಡುತ್ತಿ ಎಂಬುದರ ಬಗ್ಗೆ ವಿಚಾರಿಸಿದ್ದು, ಸದರಿ ವ್ಯಕ್ತಿ ಇಲ್ಲಿ ಜನರಿಂದ ಹಣ ಪಡೆದು ಮಟಕಾ ಬರೆದುಕೊಂಡು ಮಹಾರಾಷ್ಟ್ರದ ದುಧನಿ, ಅಕ್ಕಲಕೋಟ ಪಟ್ಟಣಗಳಿಗೆ ಹೋಗಿ, ಬಸ್ ನಿಲ್ದಾಣಗಳಲ್ಲಿ ತಿರುಗಾಡಿ ಮಟಕಾ ತಗೆದುಕೊಳ್ಳುವ ಬಗ್ಗೆ ಕೇಳಿ ಅವರಿಗೆ ಮಟಕಾ ಬರೆದುಕೊಂಡ ನಂಬರಗಳನ್ನು ಹಾಗೂ ಹಣವನ್ನು ಕೊಟ್ಟು ಬರುತ್ತೆನೆ. ಸದರಿಯವರ ಹೆಸರು ವಿಳಾಸದ ಬಗ್ಗೆ ನನಗೆ ಗೊತ್ತಿರುವುದಿಲ್ಲ ಅಂತಾ ತಿಳಿಸಿರುತ್ತಾನೆ. ನಂತರ ಸದರಿಯವನ ವಶದಿಂದ ಮಟಕಾ ಜೂಜಾಟಕ್ಕೆ ಸಂಬಂಧ ಪಟ್ಟ 1180/- ರೂಪಾಯಿ ನಗದು ಹಣ ಹಾಗೂ ಅಂಕಿ ಸಂಖ್ಯೆ ಬರೆದ ಒಂದು ಮಟಕಾ ಚೀಟಿ ಮತ್ತು ಒಂದು ಬಾಲ ಪೆನ್ನ ವಶಪಡಿಸಿಕೊಂಡು ಸದರಿಯವನೊಂದಿಗೆ ಅಫಜಲಪೂರ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.   
ಆಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರಗಳ ಜಪ್ತಿ : 
ಜೇವರ್ಗಿ ಠಾಣೆ : ದಿನಾಂಕ 07.08.2015 ರಂದು ಮುಂಜಾನೆ ನರಿಬೊಳ ಗ್ರಾಮದ ಸಿಮಾಂತರದ ಭೀಮಾ ನದಿಯ ದಂಡೆಯಲ್ಲಿ ಸಂಬಂದಪಟ್ಟ ಇಲಾಖೆಯಿಂದ ಯಾವುದೆ ಪರವಾನಿಗೆಯನ್ನು ಪಡೆದುಕೊಳ್ಳದೆ ಸಂಭಂದಪಟ್ಟ ಇಲಾಖೆಗೆ  ಮತ್ತು ಸರಕಾರಕ್ಕೆ ಮೊಸ ಮಾಡಿ ಕಳ್ಳತನದಿಂದ ಮರಳು ಸಾಗಾಣಿಗೆ ಮಾಡುತ್ತಿದ್ದ ಬಗ್ಗೆ ಬಾತ್ಮಿ ಬಂದ ಮೇರೆಗೆ ಶ್ರೀ. ಪಂಡಿತ ವಿ ಸಗರ ಪಿ.ಎಸ್.ಐ ಜೇವರ್ಗಿ ಠಾಣೆ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಸ್ಥಳಕ್ಕೆ ಹೋಗಿ ದಾಳಿ ಮಾಡಿ ಟ್ರ್ಯಾಕ್ಟರ್ ನಂ 1) KA32TK1183 Chassis No- QUTH31619004886 Engine No- 391347/SMH06804  2) KA32TA5287 3) KA32-4935 4) KA32T5789 5) KA32TA7096 6) Engine No 431020YSHA0208, Chassis No- QYCB406007786  ಮತ್ತು 2 ಬ್ರಾಸ್ ಮರಳು ಅಂ.ಕಿ 1000/- ರೂ ನೇದ್ದವುಗಳು  ಪಂಚರ ಸಮಕ್ಷಮದಲ್ಲಿ  ಜಪ್ತ ಮಾಡಿಕೊಂಡಿದ್ದು ದಾಳಿಯ ಕಾಲಕ್ಕೆ ಸದರಿ ಟ್ರ್ಯಾಕ್ಟರ್ ಗಳ ಚಾಲಕರು ಮತ್ತು ಮಾಲೀಕರು ಓಡಿ ಹೋಗಿದ್ದು ಮರಳಿ ಜೇವರ್ಗಿ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.