POLICE BHAVAN KALABURAGI

POLICE BHAVAN KALABURAGI

10 February 2019

KALABURGI DISTRICT REPORTED CRIMES

ಮಟಕಾ ಜೂಜಾಟದಲ್ಲಿ ನಿರತವರ ಬಂಧನ :
ರಾಘವೇಂದ್ರ ನಗರ ಠಾಣೆ : ದಿನಾಂಕ 09.02.2019 ರಂದು ರಾಘವೇಂದ್ರ ನಗರ ಠಾಣಾ ವ್ಯಾಪ್ತಿಯ ಸಂತೋಷ ಕಾಲೋನಿಯ ಡಬರಾಬಾದ ಕಡೆಗೆ ಹೊಗುವ ರಸ್ತೆಯ ಮೇಲೆ ಹೊದಾಗ ನನಗೆ ಖಚಿತ ಬಾತ್ಮಿ ಬಂದಿದ್ದೆನೆಂದರೆ, ಠಾಣಾ ವ್ಯಾಪ್ತಿಯ ಸಂತೋಷ ಕಾಲೋನಿಯ ಹನುಮಾನದೇವ ಗುಡಿ ಹತ್ತಿರ ರಸ್ತೆಯ ಪಕ್ಕದಲ್ಲಿ ಒಬ್ಬ ವ್ಯಕ್ತಿ ಕೂಳಿತುಕೊಂಡು ರಸ್ತೆಯ ಮೇಲೆ ಹೋಗಿ ಬರುವವರಿಗೆ ಇದು ಕಲ್ಯಾಣ ಮಟಕಾ ಇದೆ 1 ರೂಪಾಯಿಗೆ 80 ರುಪಾಯಿ ಬರುತ್ತದೆ ಅಂತ ಹೇಳುತ್ತಾ ಸಾರ್ವಜನಿಕರಿಂದ ಹಣ ಪಟೆದುಕೊಂಡು ಮಟಕಾ ಚೀಟಿ ಬರೆದುಕೂಡುತ್ತಿದ್ದಾನೆ ಅಂತ ಖಚಿತ ಬಾತ್ಮಿ ಬಂದ ಮೇರೆಗೆ ಶ್ರೀ ಶಿವಯೋಗಿ ಎ.ಎಸ್‌‌‌.ಐ ರಾಘವೇಂದ್ರ ನಗರ ಠಾಣೆ ಹಾಗು ಸಿಬ್ಬಂದಿ ಮತ್ತು ಪಂಚರೊಂದಿಗೆ ಸಂತೋಷ ಕಾಲೋನಿಯ ಹನುಮಾನ ದೇವರ ಗುಡಿ ಹತ್ತಿರ ಹೋಗಿ ಮರೆಯಲ್ಲಿ ನಿಂತುಕೊಂಡು ನೋಡಲಾಗಿ ಹನುಮಾನ ದೇವರ ಗುಡಿಯ ಪಕ್ಕದ ರಸ್ತೆಯ ಮೇಲೆ ಒಬ್ಬ ವ್ಯಕ್ತಿ ಕುಳಿತುಕೊಂಡು ರಸ್ತೆಯ ಮೇಲೆ ಹೋಗಿ ಬರುವವರಿಗೆ ಇದು ಕಲ್ಯಾಣ ಮಟಕಾ ಇದೆ 1 ರೂಪಾಯಿಗೆ 80 ರುಪಾಯಿ ಬರುತ್ತದೆ ಅಂತ ಹೇಳುತ್ತಾ ಸಾರ್ವಜನಿಕರಿಂದ ಹಣ ಪಟೆದುಕೊಂಡು ಮಟಕಾ ಚೀಟಿ ಬರೆದುಕೂಡುತ್ತಿರುವ ಬಗ್ಗೆ ಖಚಿತ ಪಡಿಸಿಕೊಂಡು ದಾಳಿ ಮಾಡಿ ಮಾಡಲು ಮಟಕಾ ಬರೆಯಿಸಲು ಬಂದವರು ಓಡಿ ಹೋಗಿದ್ದು ಮಟಕಾ ಚೀಟಿಯನ್ನು ಬರೆದುಕೊಳ್ಳುತ್ತಿದ್ದವನನ್ನು ಹಿಡಿದುಕೊಂಡು ಅವನ ಹೆಸರು ವಿಳಾಸ ವಿಚಾರಿಸಲು ಸದರಿಯವನು ತನ್ನ ಹೆಸರು ಅನೀಲ ತಂದೆ ನಾಗಪ್ಪ ಮಡಿವಾಳ ಸಾ: ನರೋಣಾ ತಾ: ಆಳಂದ ಹಾ:ವ: ಸಂತೋಷ ಕಾಲೋನಿ ಕಲಬುರಗಿ ಅಂತ ತಿಳಿಸಿದ್ದು ಸದರಿಯವನ ಅಂಗಶೋದನೆ ಮಾಡಲು ಸದರಿಯವನ ಹತ್ತಿರ 1) ನಗದು ಹಣ 525/-ರೂ  2) 1 ಮಟಕಾ ಬರೇದ ಚೀಟಿಗಳು ಅ:ಕಿ: 00 ಮತ್ತು 3) ಒಂದು ಬಾಲ ಪೇನ್ ಅ:ಕಿ: 00 ದೊರೆತಿದ್ದು ಸದರಿಯವುಗಳನ್ನು ವಶಕ್ಕೆ ತೆಗೆದುಕೊಂಡು ಸದರಿಯವನೊಂದಿಗೆ ರಾಘವೇಂದ್ರ ನಗರ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.   
ರಾಘವೇಂದ್ರ ನಗರ ಠಾಣೆ : ದಿನಾಂಕ 09.02.2019 ರಂದು ರಾಘವೇಂದ್ರ ನಗರ ಠಾಣಾ ವ್ಯಾಪ್ತಿಯ ಖದೀರ ಚೌಕ ಹತ್ತಿರ ರಸ್ತೆಯ ಪಕ್ಕದಲ್ಲಿ ಒಬ್ಬ ವ್ಯಕ್ತಿ ಹಣ್ಣಿನ ಬಂಡಿ ಇಟ್ಟುಕೊಂಡು ರಸ್ತೆಯ ಮೇಲೆ ಹೋಗಿ ಬರುವವರಿಗೆ ಇದು ಕಲ್ಯಾಣ ಮಟಕಾ ಇದೆ 1 ರೂಪಾಯಿಗೆ 80 ರುಪಾಯಿ ಬರುತ್ತದೆ ಅಂತ ಹೇಳುತ್ತಾ ಸಾರ್ವಜನಿಕರಿಂದ ಹಣ ಪಟೆದುಕೊಂಡು ಮಟಕಾ ಚೀಟಿ ಬರೆದುಕೂಡುತ್ತಿದ್ದಾನೆ ಅಂತ ಖಚಿತ ಬಾತ್ಮಿ ಬಂದ ಮೇರೆಗೆ  ಶ್ರೀಮತಿ ಅಕ್ಕ ಮಹಾದೇವಿ ಪಿ.ಎಸ್‌‌.ಐ. ರಾಘವೇಂದ್ರ ನಗರ ಠಾಣೆ ಗು ಸಿಬ್ಬಂದಿ ಮತ್ತು ಪಂಚರೊಂದಿಗೆ  ಎಮ್.ಎಸ್.ಕೆ.ಮೀಲ್ ಬಡಾವಣೆಯ ಖದೀರ ಚೌಕ ಹತ್ತಿರ ಹೋಗಿ ಮರೆಯಲ್ಲಿ ನಿಂತು ನೋಡಲು ಖದೀರ ಚೌಕ ಪಕ್ಕ ಬಸ್ಸ ನಿಲ್ದಾಣ ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿ ಒಬ್ಬ ವ್ಯಕ್ತಿ ಹಣ್ಣಿನ ಬಂಡಿ ಇಟ್ಟುಕೊಂಡು ರಸ್ತೆಯ ಮೇಲೆ ಹೋಗಿ ಬರುವವರಿಗೆ ಇದು ಕಲ್ಯಾಣ ಮಟಕಾ ಇದೆ 1 ರೂಪಾಯಿಗೆ 80 ರುಪಾಯಿ ಬರುತ್ತದೆ ಅಂತ ಹೇಳುತ್ತಾ ಸಾರ್ವಜನಿಕರಿಂದ ಹಣ ಪಟೆದುಕೊಂಡು ಮಟಕಾ ಚೀಟಿ ಬರೆದುಕೂಡುತ್ತಿರುವ ಬಗ್ಗೆ ಖಚಿತ ಪಡಿಸಿಕೊಂಡು ದಾಳಿ ಮಾಡಲು, ಮಟಕಾ ಬರೆಯಿಸಲು ಬಂದವರು ಓಡಿ ಹೋಗಿದ್ದು ಮಟಕಾ ಚೀಟಿಯನ್ನು ಬರೆದುಕೊಳ್ಳುತ್ತಿದ್ದವನನ್ನು ಹಿಡಿದುಕೊಂಡು ಅವನ ಹೆಸರು ವಿಳಾಸ ವಿಚಾರಿಸಲು ಸದರಿಯವನು ತನ್ನ ಹೆಸರು ಮಹ್ಮದ ರಫೀ ತಂದೆ ಸುಲೇಮಾನಸಾಬ ಹೇರೂರ ಸಾ: ಮಿಜಬಾ ನಗರ ಎಮ್.ಎಸ್.ಕೆ.ಮಿಲ್ ಕಲಬುರಗಿ ಅಂತ ತಿಳಿಸಿದ್ದು ನಂತರ ಸದರಿಯವನ ಅಂಗಶೋದನೆ ಮಾಡಲು ಸದರಿಯವನ ಹತ್ತಿರ 1) ನಗದು ಹಣ 1580/-ರೂ  2) 1 ಮಟಕಾ ಬರೇದ ಚೀಟಿಗಳು ಅ:ಕಿ: 00 ಮತ್ತು 3) ಒಂದು ಬಾಲ ಪೇನ್ ಅ:ಕಿ: 00 ದೊರೆತಿದ್ದು ಸದರಿಯವುಗಳನ್ನು ವಶಕ್ಕೆ ತೆಗೆದುಕೊಂಡು ಸದರಿಯವನೊಂದಿಗೆ ರಾಘವೇಂದ್ರ ನಗರ ಠಾಣೆಗೆ ಬಂದು ಪ್ರಕರಣ ದಾಖಲಿಸಲಾಗಿದೆ.   
ದ್ವೀಚಕ್ರ ವಾಹನ ಕಳವು ಪ್ರಕರಣ :
ರಾಘವೇಂದ್ರ ನಗರ ಠಾಣೆ : ಶ್ರೀ ಮಹೇಶಕುಮಾರ ತಂದೆ ಅಶೋಕಕುಮಾರ ಕುಲಕರ್ಣೀ ಸಾ: ರಾಮ ಮಂದಿರ ಬ್ರಹ್ಮಪೂರ ಕಲಬುರಗಿ ರವರು ಹಿರೊ ಸ್ಪೇಂಡರ ಮೊಟಾರ ಸೈಕಲ ನಂ ಕೆಎ 32 ಇಸಿ 2742 ನೇದ್ದು ಖರಿದಿಸಿದ್ದು ಸದರಿ ಮೋಟಾರ ಸೈಕಲನ್ನು ನಾನೆ ಉಪಯೋಗಿಸುತ್ತಾ ಬಂದಿದ್ದು ಇರುತ್ತದೆ. ಎಂದಿನಂತೆ ದಿನಾಂಕ 10.01.2019 ರಂದು ರಾತ್ರಿ 10:30 ಗಂಟೆಗೆ ಸುಮಾರಿಗೆ ನಾನು ನನ್ನ ಮೋಟಾರ ಸೈಕಲನ್ನು ನಮ್ಮ ಮನೆಯ ಪಕ್ಕದಲ್ಲಿ ನಿಲ್ಲಿಸಿ ರಾತ್ರಿ ವೇಳೆಯಲ್ಲಿ ಮನೆಯಲ್ಲಿ ಮಲಗಿಕೊಂಡಿದ್ದು ದಿನಾಂಕ 11.01.2019 ರಂದು ಬೆಳ್ಳಿಗ್ಗೆ 8:30 ಗಂಟೆಗೆ ಎದ್ದು ನೋಡಲು ನಾನು ಇಟ್ಟಿದ ಮೋಟಾರ ಸೈಕಲ ಇರಲಿಲ್ಲ ನಂತರ ನನಗೆ ಪರಿಚಯಸ್ಥರಲ್ಲಿ ವಿಚಾರಿಸಿದ್ದು ಮತ್ತು ಎಲ್ಲಾ ಕಡೆಗೆ ಹುಡುಕಾಡಿದ್ದು ಮೋಟಾರ ಸೈಕಲ ಪತ್ತೆ ಯಾಗಿರುವದಿಲ್ಲ. ಅಂದಿನಿಂದ ಇಂದಿನವರೆಗೆ ನಾನು ನನ್ನ ಮೊಟಾರ ಸೈಕಲ ಪತ್ತೆ ಕುರಿತು ಎಲ್ಲಾ ಕಡೆಗೆ ವಿಚಾರಿಸಿದ್ದು ಪತ್ತೆಯಾಗಿರುವದಿಲ್ಲ. ಯಾರೊ ಕಳ್ಳರು ಮೋಟಾರ ಸೈಕಲನ್ನು ಕಳ್ಳತನ ಮಾಡಿಕೊಂಡು ಹೋಗಿದ್ದು ಇರುತ್ತದೆ. ಅಂತಾ ಸಲ್ಲಿಸಿದ ದೂರು ಸಾರಾಂಶದ ಮೇಲಿಂದ ರಾಘವೇಂದ್ರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No comments: