POLICE BHAVAN KALABURAGI

POLICE BHAVAN KALABURAGI

19 August 2020

Kalaburagi District Press Note for Ganesh Festival

: ಪತ್ರಿಕಾ ಪ್ರಕಟಣೆ ಪೊಲೀಸ್ ಅಧೀಕ್ಷಕರು ಕಲಬುರಗಿ ಜಿಲ್ಲೆ ರವರಿಂದ ದಿನಾಂಕ 19-08-2020:

          ಶ್ರೀ ಗಣೇಶ ಚತುರ್ಥಿ ಹಬ್ಬವು ದಿನಾಂಕ 22-08-2020 ರಂದು ಆಚರಣೆಗೆ ಬರಲಿದೆ. ಈ ಹಬ್ಬವನ್ನು ಜಿಲ್ಲೆಯಲ್ಲಿ ಪಾರಂಪರಿಕವಾಗಿ ಪ್ರತಿ ವರ್ಷವೂ ವಿಜೃಂಬಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡಿರುವುದರಿಂದ ಶ್ರೀ ಗಣೇಶ ಉತ್ಸವ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ರಾಜ್ಯ ಸರ್ಕಾರದ ಮಾರ್ಗ ಸೂಚಿ ಅನ್ವಯ ಆಚರಿಸಬೇಕಾಗಿರುತ್ತದೆ. ಹಿಗಿದ್ದು ಜಿಲ್ಲೆಯಲ್ಲಿ ಸಾರ್ವಜನಿಕರು ಸರ್ಕಾರದ ಈ ಕೆಳಕಂಡ ನಿಯಮಗಳನ್ನು ಪಾಲಿಸಲು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

 1.       ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಆಥವಾ ಸರ್ಕಾರಿ/ಖಾಸಗಿ/ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.

 2.   ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.

 3.  ಪಾರಂಪರಿಕ ಗಣೇಶೋತ್ಸವಕ್ಕಾಗಿ, ಗಣೇಶೋತ್ಸವ ಸಮೀತಿಗಳು/ ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೋರೇಷನ/ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ಒಂದು ವಾರ್ಡಗೆ / ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು.

 4.   ಇಂತಹ ಸ್ಥಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.

 5.  ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ/ಸಂಗೀತ/ನೃತ್ಯ ಇನ್ನೀತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವದಿಲ್ಲ.

 6.  ಶ್ರೀ ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿರ್ಸಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹೊರಡಿಸತಕ್ಕದಲ್ಲ / ಮಾಡತಕ್ಕದ್ದಲ್ಲ ಇದನ್ನು ಸಂಪೂರ್ಣವಾಗಿ ನಿರ್ಬಂದಿಸಿದೆ

 7.     ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳನ್ನು ಅತಿ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ/ ಜಿಲ್ಲಾಡಳಿತ /ಹತ್ತಿರದ ಸ್ಥಳೀಯ ಸಂಸ್ಥೆಗಳ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೋಬೈಲ್ ಟ್ಯಾಂಕಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರಗಳಲ್ಲಿ ವಿಸರ್ಜಿಸುವುದು.

 8. ಶ್ರೀ ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ/ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ನ್ಯಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ ವ್ಯವಸ್ಥೆಯನ್ನು ಕಲ್ಪಿಸುವುದು.

 9.  ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಟ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು.

 10.     ಭಕ್ತಾದಿಗಳು ಮತ್ತು ಸಾರ್ವನಿಕರು ಕಡ್ಡಾಯವಾಗಿ ಮುಖಗವಸು ಧರಿಸತಕ್ಕದ್ದು.

 11.   ಕೋವಿಡ್-19 ಸಾಂಕ್ರಾಮಿಕ ಸೊಂಕು ಹರಡುವಿಕೆಯನ್ನು ತಡಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೆ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೆ ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಎಲ್ಲಾ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

 12.  ಶ್ರೀ ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ, ಜಿಲ್ಲಾಡಳಿತ ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ/ಪ್ರಾಧೀಕಾರಗಳಿಂದ ಹೊರಡಿಸಲಾದ ಎಲ್ಲಾ ಆದೇಶ/ ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು.

 13. ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೆ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು. 

 14.  ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ-2005 ಭಾರತೀಯ ದಂಡ ಸಂಹಿತೆ ಕಲಂ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪ-ಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.

                                                                                                                 ಪೊಲೀಸ್ ಅಧೀಕ್ಷಕರು

                                                                                             ಕಲಬುರಗಿ ಜಿಲ್ಲೆ

 ಗೆ,

ಸಂಪಾದಕರು

ಕಲಬುರಗಿ ಜಿಲ್ಲಾ/ನಗರದ ಎಲ್ಲಾ ಪತ್ರಿಕೆಗಳು.


19 June 2020

KALABURAGI DISTRICT PRESS NOTE

                                                                   ಪೊಲೀಸ್ಅಧೀಕ್ಷಕರವರ ಕಛೇರಿ
                                                                         ದಿನಾಂಕ:19/06/2020
ಪತ್ರಿಕಾ ಪ್ರಕಟಣೆ
        ಮೂಲಕ ಕಲಬುರಗಿ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ತಿಳಿಯಪಡಿಸುವದೆನೆಂದರೆ, ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಪರೀಕ್ಷೆ ಕುರಿತು ಆರೋಗ್ಯ ಇಲಾಖೆಯಿಂದ ಶಂಕಿತ ವ್ಯಕ್ತಿಗಳಿಂದ ಮಾದರಿ (ಸ್ಯಾಂಪಲ್)‌ ನ್ನು ಸಂಗ್ರಹಿಸಿ ಕಳುಹಿಸಲಾಗುತ್ತದೆ. ಅದರ ವರದಿಯು ಪಾಸಿಟಿವ್ಅಂತಾ ಬಂದ ತಕ್ಷಣ ಅಂತಹ ವ್ಯಕ್ತಿಗಳನ್ನು ನಿಗದಿತ ಆಸ್ಪತ್ರೆಗೆ ಚಿಕಿತ್ಸೆ ಕುರಿತು ಕಳಹಿಸಿಕೊಡಲಾಗುತ್ತಿದೆ. ಆದರೇ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಕೊರೊನಾ ಪಾಸಿಟಿವ್ಇರುವಂತಹ ವ್ಯಕ್ತಿಗಳನ್ನು ಅವರ ವಾಸಸ್ಥಾನ ದಿಂದ  ಆಸ್ಪತ್ರೆಗೆ ಕಳುಹಿಸುವ ಸಮಯದಲ್ಲಿ ಕೆಲವು ಪಾಸಿಟಿವ್ಇರುವಂತಹ ವ್ಯಕ್ತಿಗಳು ಚಿಕಿತ್ಸೆ ಕುರಿತು ಹೋಗಲು ಒಪ್ಪದೆ ಮೊಂಡುತನ ಪ್ರದರ್ಶೀಸುವದು ಮತ್ತು ಆರೋಗ್ಯ ಇಲಾಖೆ ಹಾಗೂ ಪೊಲೀಸ್ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ಕರರ್ತವ್ಯಕ್ಕೆ ಅಡಚಣೆ ಮಾಡಿದ್ದು ಇರುತ್ತದೆ.

        ಸದರಿ ಪಾಸಿಟಿವ್ಬಂದಂತಹ ವ್ಯಕ್ತಿಗಳನ್ನು ಆಸ್ಪತ್ರೆಗೆ ಕಳುಹಿಸುವದರ ಉದ್ದೇಶ ಅವರ ಆರೋಗ್ಯ ಕಾಪಾಡಲು ಮತ್ತು ಕೊರೊನಾ ವೈರಸನ್ನು ಇನ್ನೋಬ್ಬರಿಗೆ ಹರಡುವದನ್ನು ತಡೆಯುವದಾಗಿರುತ್ತದೆ. ಇದನ್ನು ಅರಿಯದೇ ಅದಕ್ಕಾಗಿ ಕೆಲಸ ಮಾಡುವಂತಹ ಇಲಾಖೆಯ ಸಿಬ್ಬಂದಿ ಹಾಗೂ ಅಧಿಕಾರಿಗಳ ರ್ತವ್ಯಕ್ಕೆ ಅಡ್ಡಿಪಡಿಸುವದನ್ನು ಇಲಾಖೆಯು ಗಂಭಿರವಾಗಿ ಪರಿಗಣಿಸಿರುತ್ತದೆ. ಇನ್ನೂ ಮುಂದೆ ಜಿಲ್ಲೆಯ ಯಾವುದೇ ಸ್ಥಳಗಳಲ್ಲಿ ಕೊರೊನಾ ಪಾಸಿಟಿವ್ಬಂದಂತಹ ವ್ಯಕ್ತಿಗಳು ಆರೋಗ್ಯ ಇಲಾಖೆಯಿಂದ ನೀಡುವ ಸೂಚನೆಗಳನ್ನು ಪಾಲಿಸಿ ಸಹಕರಿಸಲು ವಿನಂತಿಕೊಳ್ಳಲಾಗಿದೆ. ಒಂದು ವೇಳೆ  ಇದಕ್ಕೆ ವಿರೋಧ ವ್ಯಕ್ತಪಡಿಸಿದಲ್ಲಿ ಪೊಲೀಸ್ಇಲಾಖೆಯಿಂದ ಅಂತಹ ವ್ಯಕ್ತಿಗಳ ವಿರುದ್ಧ ಅತ್ಯಂತ ಕಠಿಣ ಕಾನೂನು ಕ್ರಮ ಜರುಗಿಸಲಾಗುವದು.
                                                                                 ಸಹಿ/-
                                                                         ಪೊಲೀಸ್ಅಧೀಕ್ಷಕರು
                                                                            ಕಲಬುರಗಿ ಜಿಲ್ಲೆ

16 June 2020

Kalaburagi District Press Note for Recruitment


                                                                                                              ಪೊಲೀಸ್ ಅಧೀಕ್ಷಕರವರ ಕಛೇರಿ,           
                                                                                                                 ಕಲಬುರಗಿ ಜಿಲ್ಲೆ.
                                                                                                                   ದಿನಾಂಕ: 16-06-2020
                                                                           ಪತ್ರಿಕಾ ಪ್ರಕಟಣೆ
               2020-21 ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬಂಧ ಅರ್ಜಿ ಆಹ್ವಾನಿಸಲಾಗಿದ್ದುಪ್ರಸ್ತುತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಈ ಹಿಂದೆ ನಿಗಧಿಪಡಿಸಲಾಗಿದ್ದ ಅರ್ಜಿ ಆಹ್ವಾನದ ದಿನಾಂಕಗಳನ್ನು ಮಾತ್ರ ವಿಸ್ತರಿಸಲಾಗಿರುತ್ತದೆ. ವಿವರ ಈ ಕೆಳಕಂಡಂತಿದೆ. ಇನ್ನುಳಿದ ಅರ್ಹತಾ ಷರತ್ತುಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. (ವಯೋಮಿತಿ ಸೇರಿದಂತೆ)
                          
ಕ್ರಸಂ
ವೃಂದ
ಹುದ್ದೆಗಳ ಸಂಖ್ಯೆ
ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕ
ಶುಲ್ಕ ಪಾವತಿಸಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕ
ಅರ್ಜಿ ಸಲ್ಲಿಸಲು ಮರು ನಿಗದಿಪಡಿಸಲಾದ ಕೊನೆಯ ದಿನಾಂಕ
ಶುಲ್ಕ ಪಾವತಿಸಲು ಮರು ನಿಗದಿಪಡಿಸಲಾದ ಕೊನೆಯ ದಿನಾಂಕ
1
ಸಿ.ಪಿ.ಸಿ. (ಪುರುಷ ಮಹಿಳಾ) (ಕಲ್ಯಾಣ ಕರ್ನಾಟಕ)
558
22-06-2020
25-06-2020
09-07-2020
13-07-2020
2
ಎ.ಪಿ.ಸಿ. (ಪುರುಷ)   (ಸಿಎಆರ್/ಡಿಎಆರ್)
(ಕಲ್ಯಾಣ ಕರ್ನಾಟಕ)
444
22-06-2020
25-06-2020
09-07-2020
13-07-2020
3
ಸಿ.ಪಿ.ಸಿ. (ಪುರುಷ ಮಹಿಳಾ)
2007
22-06-2020
25-06-2020
13-06-2020
15-07-2020
4
ಸ್ಟೇ.ಆರ್.ಪಿ.ಸಿ. (ಪುರುಷ ಮಹಿಳಾ) (ಕೆಎಸ್.ಆರ್.ಪಿ ಐಆರ್.ಬಿ)
1005
22-06-2020
25-06-2020
13-06-2020
15-07-2020
5
ಸ್ಟೇ.ಆರ್.ಪಿ.ಸಿ. (ಪುರುಷ ಮಹಿಳಾ) (ಕೆಎಸ್.ಆರ್.ಪಿ ಐಆರ್.ಬಿ)
2420
15-06-2020
18-06-2020
06-07-2020
08-07-2020
6
ಸ್ಟೇ.ಆರ್.ಪಿ.ಸಿ. (ಪುರುಷ)  (ಬ್ಯಾಂಡ್ಸಮನ್) (ಕೆಎಸ್.ಆರ್.ಪಿ ಐಆರ್.ಬಿ)
252
                   

                                                                                                                         ಪೊಲೀಸ್ ಅಧೀಕ್ಷಕರು,
                                                                                                                              ಕಲಬುರಗಿ ಜಿಲ್ಲೆ,
                                                                                                                             ಕಲಬುರಗಿ.